ಬಂಟ್ವಾಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರನ್ನು ಬಂಟ್ವಾಳ ಪುರಸಭಾದ್ಯಕ್ಷ ಮಹಮ್ಮದ್ ಶರೀಫ್ ಅವರ ತಂಡ ಭೇಟಿಯಾಯಿತು. ಈ ಸಂದರ್ಭ ನೂತನ ಅಧ್ಯಕ್ಷರನ್ನು ಡಿ.ಕೆ.ಶಿವಕುಮಾರ್ ಮತ್ತು ಸಲೀಂ ಅಹಮದ್ ಅಭಿನಂದಿಸಿ, ಬಂಟ್ವಾಳದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸುವಂತೆ ಸಲಹೆ ನೀಡಿದರು. ಈ ವೇಳೆ ಪುರಸಭಾ ಸದಸ್ಯ ಅಬುಬಕರ್ ಸಿದ್ದೀಕ್ ಗುಡ್ಡೆಯಂಗಡಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಪ್ರಮುಖರಾದ ಶಶಿಧರ ಹೆಗ್ಡೆ, ವಿಶ್ವಾಸ್ ದಾಸ್, ಎ.ಸಿ.ವಿನಯರಾಜ್, ನವೀನ್ ಡಿಸೋಜ, ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಇದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…