ಬಂಟ್ವಾಳ

ದೀಪಾವಳಿ ಹಿನ್ನೆಲೆ: ಶಾಸಕ ರಾಜೇಶ್ ನಾಯ್ಕ್ ಕಚೇರಿಯಲ್ಲಿ ಹವನ

ಜಾಹೀರಾತು

ಬಂಟ್ವಾಳ: ದೀಪಾವಳಿ ಹಬ್ಬದ ಪ್ರಯುಕ್ತ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಕಚೇರಿಯಲ್ಲಿ ಭಾನುವಾರ ಬೆಳಗ್ಗೆ ಗಣಹೋಮ ನಡೆಸಿ, ಕ್ಷೇತ್ರದ ಅಭ್ಯುದಯಕ್ಕಾಗಿ ಪ್ರಾರ್ಥಿಸಲಾಯಿತು. ಮಹೇಶ್ ಭಟ್ ಧಾರ್ಮಿಕ ಕಾರ್ಯ ನೆರವೇರಿಸಿದರು. ಈ ಸಂದರ್ಭ ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ  ಜಿ.ಕೆ. ಭಟ್,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಂಟ್ವಾಳ ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ,  ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರಾ, ಕಮಲಾಕ್ಷಿ ಪೂಜಾರಿ, ತಾಪಂ ಸದಸ್ಯ ಪ್ರಭಾಕರ ಪ್ರಭು, ಪ್ರಮುಖರಾದ ಉದಯ ಕುಮಾರ್ ರಾವ್, ಪ್ರಸಾದ್ ಕುಮಾರ್ ರೈ ಪರಿಯಲ್ತಡ್ಕ, ಕ.ಕೃಷ್ಣಪ್ಪ, ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ಸುದರ್ಶನ ಬಜ, ಪ್ರದೀಪ್ ಅಜ್ಜಿಬೆಟ್ಟು, ಡೊಂಬಯ ಅರಳ, ರವೀಶ್ ಶೆಟ್ಟಿ, ಗಣೇಶ್ ರೈ ಮಾಣಿ, ಅಶೋಕ್ ಶೆಟ್ಟಿ ಸರಪಾಡಿ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts