ಬಂಟ್ವಾಳ

ಯೋಧನ ಮನೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ದೀಪಾವಳಿ ಆಚರಿಸಿದ ಬಂಟ್ವಾಳ ಕ್ಷೇತ್ರ ಬಿಜೆಪಿ

ಜಾಹೀರಾತು

ಬಂಟ್ವಾಳ: ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಭಾನುವಾರ ನರಿಕೊಂಬು ಗ್ರಾಮದ ನಾಟಿ ಸಜಂಕಪಲಿಕೆಯ ಯೋಧ ನಾಗೇಶ ಮನೆಯಲ್ಲಿ ದೀಪಾವಳಿ ಆಚರಿಸಲಾಯಿತು.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಶುಭ ಹಾರೈಸಿ ಕರ್ತವ್ಯದಲ್ಲಿದ್ದ ಯೋಧ ನಾಗೇಶ್ ಅವರೊಂದಿಗೆ ವಿಡಿಯೋ ಕರೆಯ ಮೂಲಕ ಮಾತನಾಡಿ ದೀಪಾವಳಿಯ ಶುಭಾಶಯ ತಿಳಿಸಿದರು. ಬಳಿಕ ಮನೆಯವರೊಂದಿಗೆ ಮಾತನಾಡಿ ದೇಶ ಸೇವೆ ಗೈಯ್ಯುವ ಯೋಧರೊಂದಿಗೆ ದೀಪಾವಳಿ ಆಚರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನಮ್ಮೆಲ್ಲರಿಗೆ ನೀಡಿದ ಪ್ರೇರಣೆಯ ಈ ಕಾರ್ಯಕ್ರಮ ಸಂತೋಷ ತಂದಿದೆ ಎಂದರು.

ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿ ಡೊಂಬಯ ಅರಳ, ಕಾರ್ಯದರ್ಶಿಗಳಾದ ರಮನಾಥ ರಾಯಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ, ಸುರೇಶ್ ಕೋಟ್ಯಾನ್, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಪ್ರಮುಖರಾದ ಕಿಶೋರ್ ಶೆಟ್ಟಿ, ಪ್ರೇಮನಾಥ ಶೆಟ್ಟಿ, ಸುರೇಂದ್ರ, ಲೋಕೇಶ್ ನಾಟಿ, ನಾರಾಯಣ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ