ಕಲ್ಲಡ್ಕ: ಮರ್ಹೂಂ ಉಮ್ಮರ್ ಫಾರೂಕ್ ಸ್ಮರಣಾರ್ಥ ರಕ್ತದಾನ ಶಿಬಿರ. 205 ಯುನಿಟ್ ರಕ್ತ ಸಂಗ್ರಹ

ಬಂಟ್ವಾಳ: ಮರ್ಹೂಮ್ ಉಮ್ಮರ್ ಫಾರೂಕ್ ಕಲ್ಲಡ್ಕ ರವರ ಸ್ಮರಣಾರ್ಥ ಝಮಾನ್ ಬಾಯ್ಸ್ ಕಲ್ಲಡ್ಕ, ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಕಲ್ಲಡ್ಕದ ಸರಕಾರಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಲಡ್ಕ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಶೇಖ್ ಮುಹಮ್ಮದ್ ಇರ್ಫಾನಿ ಮಾತನಾಡಿ ಯುವ ಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿದ್ದೀಕ್ ಪನಾಮ ಮಾತನಾಡಿ ಯುವ ಜನತೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವುದು ಮತ್ತು ಮಾದಕ ವಸ್ತುಗಳ ನಿರ್ಮೂಲನೆಗಾಗಿ ನಾವು ವಿಶೇಷ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಕಲ್ಲಡ್ಕ ಝಮಾನ್ ಬಾಯ್ಸ್ ಅದ್ಯಕ್ಷ ಮುನಾಝ್ ಅದ್ಯಕ್ಷತೆ ವಹಿಸಿದ್ದರು. ಫಾರೂಕ್ ನ ಸಹೋದರ ತೌಫೀಕ್ ಕಲ್ಲಡ್ಕ, ರಕ್ತದಾನಿ ಹಕೀಂ ಇಸ್ಮಾಯಿಲ್ ನಗರ, ಫಲುಲ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಮುಖರಾದ ಕೆ.ಕೆ.ಹಾರಿಸ್ ಕಲ್ಲಡ್ಕ, ಶಾಫಿ ಕಲ್ಲಡ್ಕ, ಸತ್ತಾರ್ ಕಲ್ಲಡ್ಕ, ಯಾಸಿರ್ ವೆಲ್ಕಂ, ಇಮ್ರಾನ್ ನಂದಾವರ, ಅಕ್ರಂ ಸಜಿಪ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಿಬಿರದಲ್ಲಿ 205 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಬ್ಲಡ್ ಡೋನರ್ಸ್ ಅದ್ಯಕ್ಷ ಸಿದ್ದೀಕ್ ಮಂಜೇಶ್ವರ ಸ್ವಾಗತಿಸಿ, ನಿರ್ವಾಹಕ ಫಾರೂಕ್ ಬಿಗ್ ಗ್ಯಾರೇಜ್ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ: ಮರ್ಹೂಂ ಉಮ್ಮರ್ ಫಾರೂಕ್ ಸ್ಮರಣಾರ್ಥ ರಕ್ತದಾನ ಶಿಬಿರ. 205 ಯುನಿಟ್ ರಕ್ತ ಸಂಗ್ರಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*