ಬಂಟ್ವಾಳ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಫೋಡಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾರೆ. ಬಾಳ್ತಿಲ ಗ್ರಾಮ ನಿವಾಸಿ ಯತಿರಾಜ್ ಸಾವನ್ನಪ್ಪಿದವರು. ಇವರು ಹಿಂದು ಸಂಘಟನೆಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ಭಾನುವಾರ ರಾತ್ರಿ ಸುಮಾರು 10.45ರ ವೇಳೆಗೆ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಪೋಡಿ ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಓಮ್ನಿ ಕಾರು ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಯತಿರಾಜ್ ಹಾಗೂ ಓಮ್ನಿ ಕಾರು ಚಾಲಕ ಯೋಗೀಶ್ ಗಾಯಗೊಂಡರು. ಈ ವೇಳೆ ವಾಹನಗಳು ಹಾಗೂ ರಸ್ತೆ ಬದಿಯ ವಿದ್ಯುತ್ ಕಂಬ ಜಖಂಗೊಂದ್ದವು. ಗಾಯಾಳುಗಳನ್ನು ಆಂಬುಲೈನ್ಸ್ ವಾಹನದಲ್ಲಿ ಚಿಕಿತ್ಸೆ ಬಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ 11:15 ಗಂಟೆಗೆ ಯತಿರಾಜ್ ಅವರನ್ನು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಾಯಾಳು ಓಮ್ನಿ ಕಾರು ಚಾಲಕ ಯೋಗೀಶ್ ಒಳರೋಗಿಯಾಗಿ ದಾಖಲುಗೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಕಲಂ 279, 337, 304[ಎ], 427 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಲ್ಲಡ್ಕ ಸಮೀಪ ಕುದ್ರೆಬೆಟ್ಟುವಿನಲ್ಲಿ ಭೀಕರ ರಸ್ತೆ ಅಪಘಾತ: ಯುವಕ ಸಾವು"
Be the first to comment on "ಕಲ್ಲಡ್ಕ ಸಮೀಪ ಕುದ್ರೆಬೆಟ್ಟುವಿನಲ್ಲಿ ಭೀಕರ ರಸ್ತೆ ಅಪಘಾತ: ಯುವಕ ಸಾವು"