ಬಂಟ್ವಾಳ ಕ್ಷೇತ್ರ ಬಿಜೆಪಿ ಕುಟುಂಬ ಮಿಲನ ಸಮಾರೋಪ, ಪಕ್ಷಕ್ಕೆ ಹಲವರ ಸೇರ್ಪಡೆ, ಗ್ರಾಪಂನಲ್ಲಿ ಗೆಲುವಿಗೆ ಕರೆ

ಜಾಹೀರಾತು

ಬಂಟ್ವಾಳ: ಪಕ್ಷದ ಸಂಘಟನೆಯೊಂದಿಗೆ ರಾಷ್ಟ್ರವನ್ನು ಕಟ್ಟುವ ಕಾರ್ಯವನ್ನು ಬಿಜೆಪಿ ಮಾಡುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕಲ್ಲಡ್ಕದ ಏಡ್ಲ ಪದ್ಮಾಂಗಣದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಎರಡು ಗ್ರಾಮಗಳ ಕುಟುಂಬ ಮಿಲನ ಕಾರ್ಯಕ್ರಮ ಹಾಗೂ ಕ್ಷೇತ್ರದ ಕುಟುಂಬ ಮಿಲನ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಮಾತನಾಡಿ, ಬಿಜೆಪಿಗೆ ಶಕ್ತಿಕೊಟ್ಟ ಗ್ರಾಮವಾಗಿ ಗೋಳ್ತಮಜಲು ಗ್ರಾಮ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕನಿಷ್ಠ ಅವಧಿಯಲ್ಲಿ ಗರಿಷ್ಠ ಅನುದಾನದ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಎಂದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಪ್ರಧಾನಿ ಮೋದಿಯವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಗ್ರಾ.ಪಂ.ನಲ್ಲಿ ನಾವು ಬಿಜೆಪಿ ಬೆಂಬಲಿಸಬೇಕಿದೆ ಎಂದರು.   ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.  ರಾಜ್ಯ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಜಿ.ಪಂ.ಸದಸ್ಯರಾಸ  ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ರವೀಂದ್ರ ಕಂಬಳಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಜಿಲ್ಲಾ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಜಿಲ್ಲಾ ಯುವ ಮೋರ್ಚಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ  ಸುದರ್ಶನ್ ಬಜ,  ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ್ಯ ಅರಳ, ಕ್ಷೇತ್ರ ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ರೊನಾಲ್ಡ್ ಡಿಸೋಜ, ಕೋಶಾಧಿಕಾರಿ ಪ್ರಕಾಶ್ ಅಂಚನ್, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಜೋಯ್ಲಾಸ್ ಡಿಸೋಜ, ಕ್ಷೇತ್ರ ಕಾರ್ಯದರ್ಶಿ ಸೀತಾರಾಮ ಪೂಜಾರಿ, ಹರ್ಷಿಣಿ, ತಾ.ಪಂ.ಸದಸ್ಯರಾದ ಮಹಾಬಲ ಆಳ್ವ, ಪ್ರಭಾಕರ ಪ್ರಭು,  ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿಗಳಾದ ಪುರುಷೋತ್ತಮ ಶೆಟ್ಟಿ, ರಮನಾಥ ರಾಯಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ಆನಂದ ಎ.ಶಂಭೂರು, ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮೊದಲಾದವರಿದ್ದರು.

ಗೋಳ್ತಮಜಲು ಗ್ರಾ.ಪಂ. ನಿಕಟಪೂರ್ವ ಸದಸ್ಯ ಎಲಿಯಾಸ್ ಡಿಸೋಜ ಅವರ ನೇತೃತ್ವದಲ್ಲಿ ಬಿಜೆಪಿಗೆ ಹಲವರು ಸೇರ್ಪಡೆಗೊಂಡರು.  ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಗ್ರಾ.ಪಂ.ಗೆ ನೀಡಿದ ಅನುದಾನಗಳ ವಿವರ ನೀಡಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಕ್ಷೇತ್ರ ಬಿಜೆಪಿ ಕುಟುಂಬ ಮಿಲನ ಸಮಾರೋಪ, ಪಕ್ಷಕ್ಕೆ ಹಲವರ ಸೇರ್ಪಡೆ, ಗ್ರಾಪಂನಲ್ಲಿ ಗೆಲುವಿಗೆ ಕರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*