ಬಂಟ್ವಾಳ: ವುಮೆನ್ ಇಂಡಿಯಾ ಮೂಮೆಂಟ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂಮೆಂಟ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು.
ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ರಾಜ್ಯಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿದರು. ನ್ಯಾಷನಲ್ ವುಮೆನ್ ಫ್ರಂಟ್ ಸದಸ್ಯೆ ಶಹಿಲಾ ತುಂಬೆ, ಕ್ಯಾಂಪಸ್ ಫ್ರಂಟ್ ಇದರ ಬಂಟ್ವಾಳ ಘಟಕ ಕಾರ್ಯದರ್ಶಿ ಸಫ್ರೀನಾ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ವುಮೆನ್ ಇಂಡಿಯಾ ಮೂಮೆಂಟ್ ದ.ಕ ಜಿಲ್ಲಾ ಸಮಿತಿ ಸದಸ್ಯೆ ಝುಲೈಕಾ ಕಾರ್ಯಕ್ರಮ ನಿರೂಪಿಸಿದರು.
| ದ್ವಿತೀಯ ಪಿಯುಸಿ: ಸರಕಾರಿ ಕಾಲೇಜುಗಳ ಸಾಧಕರಿಗೆ ಸನ್ಮಾನ (more…)