ಕ್ಯಾಂಪಸ್ ಫ್ರಂಟ್ ವತಿಯಿಂದ ಬಂಟ್ವಾಳದಲ್ಲಿ ಪ್ರತಿಭಟನೆ

  • ‘ಸ್ಕಾಲರ್ಶಿಪ್ ಕೊಡಿ’ ಸ್ತಬ್ದ ಚಿತ್ರ ಪ್ರದರ್ಶನ

ಜಾಹೀರಾತು

ಜಾಹೀರಾತು

ಜಾಹೀರಾತು

ಬಂಟ್ವಾಳ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ವತಿಯಿಂದ ಸ್ಕಾಲರ್ಶಿಪ್ ಮಂಜೂರಾತಿ ವಿಳಂಬ ಮತ್ತು ಅವ್ಯವಸ್ಥೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಿ.ಹೆಚ್.ಡಿ, ಎಂ.ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ಸರಕಾರದ ಕ್ರಮ ವಿರುದ್ಧ ಕ್ಯಾಂಪಸ್ ಫ್ರಂಟ್ ಹಮ್ಮಿಕೊಂಡ “ಸ್ಕಾಲರ್ಶಿಪ್ ಕೊಡಿ” ರಾಜ್ಯವ್ಯಾಪಿ ವಿದ್ಯಾರ್ಥಿ ಆಂದೋಲನದ ಭಾಗವಾಗಿ ಪ್ರತಿಭಟನಾ ಸಭೆಯು ಬಿಸಿ ರೋಡಿನ ಫ್ಲೈ ಓವರ್ ಕೆಳಗಡೆ ನಡೆಯಿತು.

ಕ್ಯಾಂಪಸ್ ಫ್ರಂಟ್ ಬಂಟ್ವಾಳ ಅಧ್ಯಕ್ಷ ಫಹದ್ ಅನ್ವರ್ ಪ್ರತಿಭಟನೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡ ಸವಾದ್ ಕಲ್ಲರ್ಪೆ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವತ್ತ ಸರಕಾರಗಳು ಗಮನಹರಿಸಲಿ ಎಂದರು. ವಿದ್ಯಾರ್ಥಿ ವೇತನ ಸಿಗದಿರುವ ಸಂತ್ರಸ್ತೆ ವಿದ್ಯಾರ್ಥಿನಿ ಸಹಲಾ ಮಾತನಾಡಿದರು. ಸ್ಕಾಲರ್ಶಿಪ್ ಮೊತ್ತ ಸಿಗದೇ ಕಷ್ಟ ಅನುಭವಿಸುವ ವಿದ್ಯಾರ್ಥಿಗಳ ಚಿತ್ರನಗಳನ್ನು ಬಿಂಬಿಸುವ ‘ಸ್ತಬ್ದ ಚಿತ್ರ’ ವನ್ನು ಈ  ಸಂಧರ್ಭ ಪ್ರದರ್ಶಿಸಲಾಯಿತು.

ಕಾರ್ಯದರ್ಶಿ ಸಾಬಿತ್, ತಾಲೂಕು ಸಮಿತಿ ಸದಸ್ಯರಾದ ಐಮಾನ್, ಫಾರೂಕ್, ನಿಯಾಬ್, ಹಮೀದ್,ಹಾಶಿಮ್, ಸಜ್ಜಾದ್  ನಿಯಾಜ್, ಇರ್ಷಾದ್, ಸಫ್ವಾನ್ ಹಮ್ದನ್ , ಸಫ್ರೀನ, ಅಸೀಬಾ ಮತ್ತಿತರರು ಉಪಸ್ಥಿತರಿದ್ದರು. ಅಶ್ಪಾಕ್  ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕ್ಯಾಂಪಸ್ ಫ್ರಂಟ್ ವತಿಯಿಂದ ಬಂಟ್ವಾಳದಲ್ಲಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*