ಬಂಟ್ವಾಳ: ಸವಿತಾ ಸೌಹಾರ್ದ ಸಹಕಾರಿ ನಿಯಮಿತದ ೨೦೧೯-೨೦ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸವಿತಾ ಆರೋಗ್ಯ ನಿಧಿ ವಿತರಣಾ ಕಾರ್ಯಕ್ರಮ ಸಹಕಾರಿಯ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಂಟ್ವಾಳ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬಿ.ಸಿ.ರೋಡಿನ ಸಾಧನಾ ಹಾಲ್‌ನಲ್ಲಿ ನಡೆಯಿತು.
ಸಭೆಯಲ್ಲಿ ಅಧ್ಯಕ್ಷ ವಿಶ್ವನಾಥ ಬಂಟ್ವಾಳ್ ಮಾತನಾಡಿ, ವರದಿ ವರ್ಷದಲ್ಲಿ ಸಹಕಾರಿಯು ೧೭.೨೩ ಕೋ.ರೂ. ವಾರ್ಷಿಕ ವ್ಯವಹಾರ ನಡೆಸಿದ್ದು, ೧೨.೬೧ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಲಾಭಾಂಶದಲ್ಲಿ ಸದಸ್ಯರಿಗೆ ೧೦ ಶೇ. ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸವಿತಾ ಆರೋಗ್ಯ ನಿಽ ವಿತರಣೆಗೆ ಆಡಳಿತ ಮಂಡಳಿ ನಿರ್ಧರಿಸಿ, ಕ್ಯಾನ್ಸರ್ ಹಾಗೂ ಕಿಡ್ನಿ ಖಾಯಿಲೆಯಿಂದ ಬಳಲುತ್ತಿರುವ ಸದಸ್ಯರಿಗೆ ನೆರವು ನೀಡಲಾಗಿದೆ ಎಂದು ಸಂಘದ ಅಭಿವೃದ್ಧಿಗೆ ಸದಸ್ಯರ ಸಹಕಾರ ಕೋರಿದರು.
ಸಂಘದ ಗೌರವ ಸಲಹೆಗಾರ, ಎಸ್‌ಸಿಡಿಸಿಸಿ ಬ್ಯಾಂಕ್ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಶನ್ ಸರಪಾಡಿ ಅವರು ವಾರ್ಷಿಕ ವರದಿ ಹಾಗೂ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಸಂಘದ ನಿರ್ದೇಶಕ, ದ.ಕ.ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಭಂಡಾರಿ ಗುಂಡದಡೆ ಅವರು ಸಂಘದ ಪ್ರಗತಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮೂರು ಮಂದಿಗೆ ಸವಿತಾ ಆರೋಗ್ಯ ನಿಧಿಯನ್ನು ಹಸ್ತಾಂತರಿಸಲಾಯಿತು. ನಿರ್ದೇಶಕರಾದ ಮೋಹನ್ ಭಂಡಾರಿ ಪೊಯಿತಾಜೆ, ಸುರೇಂದ್ರ ಭಂಡಾರಿ ಪುತ್ತೂರು, ಪದ್ಮನಾಭ ಭಂಡಾರಿ ಸುಳ್ಯ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಸುರೇಶ್ ನಂದೊಟ್ಟು ಸ್ವಾಗತಿಸಿದರು. ನಿರ್ದೇಶಕ ದಿನೇಶ್ ಎಲ್.ಬಂಗೇರ ವಂದಿಸಿದರು. ನಿರ್ದೇಶಕ ವಸಂತ ಎಂ.ಬೆಳ್ಳೂರು ಕಾರ್ಯಕ್ರಮ ನಿರ್ವಹಿಸಿದರು. ಗುಮಾಸ್ತ ಪ್ರಸಾದ್ ಸಹಕರಿಸಿದರು.
Be the first to comment on "ಸವಿತಾ ಸೌಹಾರ್ದ ಸಹಕಾರಿ ನಿಯಮಿತದ ಸದಸ್ಯರಿಗೆ ನೆರವು, ಆರೋಗ್ಯ ನಿಧಿ ವಿತರಣೆ"