ಕರಿಯಂಗಳ ಗ್ರಾಮದ ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಂ.ಆರ್.ಪಿ.ಎಲ್‌ನ ಸಿ.ಎಸ್.ಆರ್. ನಿಧಿಯಿಂದ 65 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಐದು ನೂತನ ಕೊಠಡಿಗಳ ಉದ್ಘಾಟನೆಯನ್ನು ಶುಕ್ರವಾರ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ನೆರವೇರಿಸಿದರು.
ಬಂಟ್ವಾಳ: ಕರಿಯಂಗಳ ಗ್ರಾಮದ ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಂ.ಆರ್.ಪಿ.ಎಲ್‌ನ ಸಿ.ಎಸ್.ಆರ್. ನಿಧಿಯಿಂದ 65 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಐದು ನೂತನ ಕೊಠಡಿಗಳ ಉದ್ಘಾಟನೆಯನ್ನು ಶುಕ್ರವಾರ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು ಗ್ರಾಮೀಣ ಮತ್ತು ಪೇಟೆಯ ಶಾಲೆಗಳಲ್ಲಿ ಅದರಲ್ಲು ಖಾಸಗಿ ಮತ್ತು ಸರಕಾರಿ ಸಾಕಷ್ಟು ವ್ಯತ್ಯಾಸಗಳನ್ನು ಕಾಣಬಹುದಾಗಿದ್ದರೂ, ಸರಕಾರವು ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಎಂಆರ್ ಪಿ ಎಲ್ ನಂಥ ಸಂಸ್ಥೆ ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲದ ದೃಷ್ಠಿಯಿಂದ ಶಿಕ್ಷಣಕ್ಕಾಗಿ ಕೊಠಡಿ, ಲ್ಯಾಬೋರೇಟರ್ ನಂತ ಅವಶ್ಯಕತೆಗಳನ್ನು ಒದಗಿಸುತ್ತಿರುವುದು ಅಭಿನಂದನೀಯ. ಮುಂದಿನ ದಿನದಲ್ಲಿ ಶಾಲೆಗೆ ಸಭಾಭವನ ನಿರ್ಮಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಶಾಸಕರು ಭರವಸೆಯಿತ್ತರು.
ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಆಶೀರ್ವಚನ ನೀಡಿದರು. ಅತಿಥಿಯಾಗಿದ್ದ ಎಂ.ಆರ್.ಪಿ.ಎಲ್ ಡಿಜಿಎಂ ವೀಣಾ ಶೆಟ್ಟಿ ಮಾತನಾಡಿ ಸಂಸ್ಥೆಯ ಲಾಭಾಂಶದಲ್ಲಿ ಒಂದಂಶ ಸಾರ್ವಜನಿಕ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ದ.ಕ.ಜಿಲ್ಲೆಯ ಬಹುತೇಕ ಶಾಲೆಗಳಿಗೆ ಸಂಸ್ಥೆಯ ಸಿಎಸ್ ಆರ್ ನಿಧಿಯಿಂದ ಕೊಠಡಿ, ಶೌಚಾಲಯ ಸಹಿತ ಮೂಲಭೂತ ಸೌಕರ್ಯ ಪೂರೈಸಲಾಗಿದೆ ಎಂದರು.
ಎಂ. ಆರ್. ಪಿ. ಎಲ್ ನ ಸಿಎಸ್ ಆರ್ ವಿಭಾಗದ ಅಧಿಕಾರಿ ಮೊನಾ ರೂತ್, ಪೊಳಲಿ ದೇವಳದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ.ಸದಸ್ಯ ಯಶವಂತ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಕೆ. ರಾಧಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ ಎಂ.ಸಿ ಕಾರ್ಯಾಧ್ಯಕ್ಷ ವೆಂಕಟೇಶ್ ನಾವಡ ಸ್ವಾಗತಿಸಿದರು. ಸಹಶಿಕ್ಷಕಿ ಉಮಾ ವಂದಿಸಿದರು. ಜಾನೆಟ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ 65 ಲಕ್ಷ ರೂ ವೆಚ್ಚದ ಕೊಠಡಿ ಉದ್ಘಾಟನೆ"