ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಬಾಂಬಿಲ ಕೆಂಪುಗುಡ್ಡೆ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯೊಂದು ಪರವಾನಗಿರಹಿತವಾಗಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಸೂಚನೆ ಮೇರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದ ತಂಡ ಶುಕ್ರವಾರ ರಾತ್ರಿ ದಾಳಿ ನಡೆಸಿದೆ.
ಸ್ಥಳದಲ್ಲಿ ಕೋರೆಯಲ್ಲಿ ಕಲ್ಲು ತೆಗೆಯಲು ಬಳಸುತ್ತಿದ್ದ ಲಕ್ಷಾಂತರ ಮೌಲ್ಯದ ಬಾರಿ ಗಾತ್ರದ 2 ಕಟ್ಟಿಂಗ್ ಯಂತ್ರ 1 ಟಿಲ್ಲರ್ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡರು.ಕಾರ್ಯಚರಣೆಯಲ್ಲಿ ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಗ್ರಾಮ ಲೆಕ್ಕಾಧಿಕಾರಿ ಅಮೃತಾಂಶು, ಪಿ.ಡಿ.ಒ. ರವಿ, ಕಾರ್ಯದರ್ಶಿ ಲಕ್ಷ್ಮೀ ನಾರಾಯಣ, ಬಿಲ್ ಕಲೆಕ್ಟರ್ ಚೇತನ್, ತಾಲೂಕು ಕಚೇರಿ ಸಿಬ್ಬಂದಿ ಲೋಕನಾಥ್, ಸಂದೀಪ್ ಕುರಿಯಾಳ ಭಾಗವಹಿಸಿದ್ದರು.
Be the first to comment on "ಕಲ್ಲಿನ ಕ್ವಾರಿಗೆ ಬಂಟ್ವಾಳ ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ: ಸೊತ್ತುಗಳು ವಶಕ್ಕೆ"