ಬಂಟ್ವಾಳ

ಕಲ್ಲಿನ ಕ್ವಾರಿಗೆ ಬಂಟ್ವಾಳ ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ: ಸೊತ್ತುಗಳು ವಶಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಬಾಂಬಿಲ ಕೆಂಪುಗುಡ್ಡೆ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯೊಂದು ಪರವಾನಗಿರಹಿತವಾಗಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಸೂಚನೆ ಮೇರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದ ತಂಡ ಶುಕ್ರವಾರ ರಾತ್ರಿ ದಾಳಿ ನಡೆಸಿದೆ.

ಸ್ಥಳದಲ್ಲಿ ಕೋರೆಯಲ್ಲಿ ಕಲ್ಲು ತೆಗೆಯಲು ಬಳಸುತ್ತಿದ್ದ ಲಕ್ಷಾಂತರ ಮೌಲ್ಯದ ಬಾರಿ ಗಾತ್ರದ 2 ಕಟ್ಟಿಂಗ್ ಯಂತ್ರ 1 ಟಿಲ್ಲರ್ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡರು.ಕಾರ್ಯಚರಣೆಯಲ್ಲಿ ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು‌, ಗ್ರಾಮ ಲೆಕ್ಕಾಧಿಕಾರಿ ಅಮೃತಾಂಶು, ಪಿ.ಡಿ.ಒ. ರವಿ, ಕಾರ್ಯದರ್ಶಿ ಲಕ್ಷ್ಮೀ ನಾರಾಯಣ, ಬಿಲ್ ಕಲೆಕ್ಟರ್ ಚೇತನ್, ತಾಲೂಕು ಕಚೇರಿ ಸಿಬ್ಬಂದಿ ಲೋಕನಾಥ್, ಸಂದೀಪ್ ಕುರಿಯಾಳ ಭಾಗವಹಿಸಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ