ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಪ್ರಶಿಕ್ಷಣ ಕಾರ್ಯಕ್ರಮವನ್ನು ಭಾನುವಾರ ಅರಳದ ಗುಡ್ಡೆಯಂಗಡಿಯಲ್ಲಿ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ವಹಿಸಿದ್ದರು. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಪ್ರದಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಶಿಕ್ಷಣ ಸಂಚಾಲಕ ನಾರಾಯಣ ಭಂಡಾರಿ ಸ್ವಾಗತಿಸಿದರು, ಸಹ ಸಂಚಾಲಕರು ವೇದಾನಂದ ಕಾರಂತ ವಂದಿಸಿದರು, ಮಂಡಲ ಪ್ರದಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರೂಪಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…