ಬಂಟ್ವಾಳ: ಅಯೋಧ್ಯೆ ಮುಕ್ತಿ ಆಂದೋಲನದ ನೆನಪಿಗಾಗಿ ವಿಜಯೋತ್ಸವ ಹಿನ್ನೆಲೆಯಲ್ಲಿ ಡಿ.6ರಂದು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಶಿಶುಮಂದಿರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಹಿಂಜಾವೇ ಉಡುಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಶೆಟ್ಟಿ ಮೊದಲಾದವರು ಭಾಗವಹಿಸುವರು ಎಂದು ಮಾರ್ಗದರ್ಶನ ನೀಡಿದ ದಕ್ಷಿಣ ಪ್ರಾಂತ ಹಿಂಜಾವೇ ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿರಾಜ್ ಬಿ.ಸಿ.ರೋಡ್ ಹೇಳಿದರು.
ಹಿಂಜಾವೇ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಕಲಾಯಿ, ಚಂದ್ರ ಕಲಾಯಿ, ತಾಲೂಕು ಅಧ್ಯಕ್ಷ ತಿರುಲೇಶ್, ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಪೂರ್ವಭಾವಿ ಸಭೆ"