ಬಂಟ್ವಾಳ

ರೋಟರಿ ವಲಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಬಂಟ್ವಾಳ: ರೋಟರಿ ಜಿಲ್ಲೆ 3181 ವಲಯ 4ರ ವಲಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ರೋಟರಿ ಜಿಲ್ಲಾ ಗವರ್ನರ್ ರಂಗನಾಥ ಭಟ್ ಭಾನುವಾರ ಬಿ.ಸಿ.ರೋಡಿನ ಜಿ.ಬಿ.ಎಚ್.ಪಿ. ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.

ಬಂಟ್ವಾಳ ಟೌನ್, ಬಂಟ್ವಾಳ, ಫರಂಗಿಪೇಟೆ, ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ನಿಯೋಜಿತ ಗವರ್ನರ್ ಎನ್.ಪ್ರಕಾಶ ಕಾರಂತ, ಸಹಾಯಕ ಗವರ್ನರ್ ಯತಿಕುಮಾರ ಸ್ವಾಮಿ ಗೌಡ ಭಾಗವಹಿಸಿ ಮಾತನಾಡಿದರು.

ರೋಟರಿ ವಲಯ ಸೇನಾನಿಗಳಾದ ಜಯರಾಮ ರೈ, ಜಯರಾಜ್ ಎಸ್. ಬಂಗೇರ, ಕ್ರೀಡಾಕೂಟದ ವಲಯ ಕೋಅರ್ಡಿನೇಟರ್ ನಾಗರಾಜ್, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ರಮೇಶ್ ತುಂಬೆ ಉಪಸ್ಥಿತರಿದ್ದರು. ಮಡಂತ್ಯಾರು ರೋಟರಿ ಅಧ್ಯಕ್ಷ ಜಯಂತ ಶೆಟ್ಟಿ, ಬಂಟ್ವಾಳ ಟೌನ್ ಕಾರ್ಯದರ್ಶಿ ಕಿಶೋರ್, ಬಂಟ್ವಾಳ ಕಾರ್ಯದರ್ಶಿ ವಾಣಿ ಕಾರಂತ ಉಪಸ್ಥಿತರಿದ್ದರು. ಬಂಟ್ವಾಳ ಟೌನ್ ಅಧ್ಯಕ್ಷ ಪದ್ಮನಾಭ ರೈ ಸ್ವಾಗತಿಸಿದರು. ಬಂಟ್ವಾಳ ರೋಟರಿ ಅಧ್ಯಕ್ಷ ನಾರಾಯಣ ಹೆಗ್ಡೆ ವಂದಿಸಿದರು. ಪಲ್ಲವಿ ಕಾರಂತ ಪ್ರಾರ್ಥಿಸಿದರು. ರೊಟೇರಿಯನ್ನುಗಳಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ ಮತ್ತು ಅಹಮದ್ ಮುಸ್ತಾಫಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

12 hours ago