


ಬಂಟ್ವಾಳ: ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಬುಧವಾರ ಸಂಜೆ ಅಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಮೂರು ದಿನದ ಹೆಣ್ಣುಮಗು ಮೃತಪಟ್ಟಿದ್ದು, ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗುರುಪುರ – ಕೈಕಂಬ ಮೂಲದ ಉಮೈರಾ ಎಂಬ ಮಹಿಳೆ ಅಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಸಂದರ್ಭ, ಕಲ್ಪನೆ ತಿರುವು ಬಳಿ ಬರುತ್ತಲೇ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲಿಯೇ ಮೃತಪಟ್ಟಿದೆ.
Be the first to comment on "ಆಟೊ ಪಲ್ಟಿಯಾಗಿ ಮೂರು ದಿನದ ಮಗು ಸಾವು"