ಕಲ್ಲಡ್ಕ

ಮಾಣಿ ಸಮೀಪ ಕಾರುಗಳ ಡಿಕ್ಕಿ, ಚಾಲಕ ಸಹಿತ ಮೂವರಿಗೆ ಗಾಯ

ಬಂಟ್ವಾಳ: ಎರಡು ಕಾರುಗಳ ನಡುವೇ ಭೀಕರ ಅಪಘಾತ ಸಂಭವಿಸಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಗು ಹಾಗೂ ಮಹಿಳೆ ಸಹಿತ ಮೂವರು ಗಾಯಗೊಂಡ ಘಟನೆ  ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.

ಮಾಣಿ ನಿವಾಸಿಗಳಾದ ವೇಗನರ್ ಕಾರಿನ ಚಾಲಕ ನಯಾಜ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸಂಬಂಧಿಗಳಾದ ಸಫಾ ಹಾಗೂ ಚಿಕ್ಕ ಮಗು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಇವರು ನೇರಳಕಟ್ಟೆ ಮದುವೆ ಹಾಲ್ ನಿಂದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು  ಮನೆಗೆ ವೇಗನರ್ ಕಾರಿನಲ್ಲಿ  ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ  ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ವೇಗನರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ರಿಡ್ಜ್ ಕಾರಿನ ಏರ್ ಬ್ಯಾಗ್ ತೆರೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ