ಬಂಟ್ವಾಳ: ಕೋವಿಡ್ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಗುರುವಾರ ತಾಲೂಕು ಮಟ್ಟದ ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದು,ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ.ಎಂದು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಎ. ಅಣ್ಣು ನಾಯ್ಕ್ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…