ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಂದಾವರದಲ್ಲಿ ನಡೆಯಿತು.
ಬಂಟ್ವಾಳ: ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.25ರಂದು ಅಪರಾಹ್ನ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆಯಲಿರುವ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಹಾಗೂ ನೀರ್ಪಾಜೆ ಭೀಮ ಭಟ್ಟರ ಸಂಸ್ಮರಣೆ ಪುಸ್ತಕಗಳ ಬಿಡುಗಡೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಸನ್ನಿಧಿಯಲ್ಲಿ ಗುರುವಾರ ಸಂಜೆ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಉದ್ಯಮಿ ಡಾ.ಎಸ್.ಎಂ.ಗೋಪಾಲಕೃಷ್ಣ ಆಚಾರ್ಯ ಬಿಡುಗಡೆಗೊಳಿಸಿದರು. ನಂದಾವರ ಕ್ಷೇತ್ರದ ಪ್ರಧಾನ ಅರ್ಚಕ ವೇ.ಮೂ.ಮಹೇಶ ಭಟ್ ಆಶೀರ್ವದಿಸಿದರು.
ಹಿರಿಯ ಅರ್ಥಧಾರಿ, ವಿದ್ವಾಂಸ, ಸಂಶೋಧಕ ಡಾ. ಎಂ.ಪ್ರಭಾಕರ ಜೋಷಿ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಅಭಿಮಾನಿ ಬಳಗದ ಕೋಶಾಧಿಕಾರಿ ಎಸ್.ಗಂಗಾಧರ ಭಟ್ ಕೊಳಕೆ ಹೇಳಿದರು. ಈ ಸಂದರ್ಭ ಬಳಗದ ಅಧ್ಯಕ್ಷ ಸುದರ್ಶನ ಜೈನ್, ಕೋಶಾಧಿಕಾರಿ ಶಿವಶಂಕರ್, ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ಬಳಗದ ಸದಸ್ಯರಾದ ಕೃಷ್ಣ ಶರ್ಮ, ಮಹಾಬಲೇಶ್ವರ ಹೆಬ್ಬಾರ, ರವಿಕುಮಾರ್, ಸುಭಾಶ್ಚಂದ್ರ ಜೈನ್ ಈ ಸಂದರ್ಭ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…