ತಾಪಂ ಮಾಜಿ ಸದಸ್ಯ ಕಾಂಗ್ರೆಸ್ ನ ಸ್ಥಳೀಯ ನಾಯಕ ಡಿ.ಕೆ.ಹಂಝ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಅವರೊಂದಿಗೆ ಬೆಂಬಲಿಗರು ಹಾಗೂ ಜಗದೀಶ್ ಶೆಟ್ಟಿ ಮಾವಂತೂರು,ಚಂದ್ರಹಾಸ ಪೂಜಾರಿ, ಮುಸ್ತಾಫ ಮುಲ್ಲಾರಪಟ್ಣ ಸೇರಿದಂತೆ ಇವರ ಬೆಂಬಲಿಗರು ಕಾಂಗ್ರೆಸ್ ತೊರೆದು ಶನಿವಾರ ವಿಧ್ಯುಕ್ತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಶನಿವಾರ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಸರಳ ಸಮಾರಂಭದಲ್ಲಿ ಇವರೆಲ್ಲರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಪಕ್ಷದ ಶಾಲು ಹಾಕಿ ಧ್ವಜ ನೀಡಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಮುಂದಿನ ಹಂತದಲ್ಲಿ ಕಾಂಗ್ರೇಸ್ ನ ದೊಡ್ಡ ದೊಡ್ಡ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುಳಿವು ನೀಡಿದರು.

ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರನ್ನು ಸ್ವಾಗತಿಸಿದರು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ರೊನಾಲ್ಡ್ ಡಿಸೋಜ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ ಮೊದಲಾದವರಿದ್ದರು.ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಸ್ವಾಗತಿಸಿ ವಂದಿಸಿದರು.
Be the first to comment on "ತಾಪಂ ಮಾಜಿ ಸದಸ್ಯ ಕಾಂಗ್ರೆಸ್ ನ ಡಿ.ಕೆ.ಹಂಝ ಸಹಿತ ಹಲವರು ಬಿಜೆಪಿಗೆ"