ಅಭಾವಿಪ ಬಂಟ್ವಾಳದಿಂದ ಸಾಮರಸ್ಯ ದಿನ

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ  ಪರಿಷತ್ ಬಂಟ್ವಾಳ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಬಿ.ಸಿ ರೋಡಿನ ಶಿಶುಮಂದಿರದಲ್ಲಿ  ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ನಗರ ಅಧ್ಯಕ್ಷ ಹಾಗೂ ಉಪನ್ಯಾಸಕ ಡಾ.ರಮಾನಂದ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಂಬೇಡ್ಕರ್ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಮತ್ತು ಸಮಾಜದ ತೊಡಕುಗಳ ನಡುವೆ ಅದಮ್ಯ ಚೇತನವಾಗಿ ಬೆಳೆದು ಬಂದ ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುಣ್ಯಸ್ಮರಣೆಯನ್ನು, ಸಾಮಾಜಿಕ ಸಾಮರಸ್ಯ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಈ ಸಂದರ್ಭ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ತಾಲೂಕು ಸಹ ಸಂಚಾಲಕರಾದ ಅಖಿಲಾಶ್ , ನಗರ ಸಹಕಾರ್ಯದರ್ಶಿ ಅನೀಶ್ ಚೇಳೂರು ವೆಂಕಟೇಶ್ ನಾಯಕ್, ಗಗನ್ ,ನಿಖಿಲ್,ಶಿವಪ್ರಸಾದ್ , ರಂಜಿತ್ ,ಪ್ರಶಾಂತ್ , ಪ್ರಿತೇಶ್  ಮತ್ತಿತರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಭಾವಿಪ ಬಂಟ್ವಾಳದಿಂದ ಸಾಮರಸ್ಯ ದಿನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*