ಹಿಂಜಾವೇ ವತಿಯಿಂದ ಬಂಟ್ವಾಳದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಬಂಟ್ವಾಳ: ಹಿಂದು ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಆಶ್ರಯದಲ್ಲಿ  ಭಾನುವಾರ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ನಡೆಯಿತು.

ಬೆಳಗ್ಗೆ ಗಂಟೆ 9 ರಿಂದ 10ರವರೆಗೆ ನವೋದಯ ಮಿತ್ರ ಕಲಾವೃಂದ ನೆತ್ತರಕೆರೆ ಹಾಗೂ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಬಳಿಕ  ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಶ್ರೀ ಮಹಾಲಕ್ಮೀ ಕ್ಷೇತ್ರ  ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.ಅಯೋಧ್ಯೆ ರಾಮಮಂದಿರ ಸಂಪೂರ್ಣಗೊಳ್ಳುವವರೆಗೆ ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಕರೆ ನೀಡಿದರು. ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿದರು. ಹಿಂಜಾವೇ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿಂಜಾವೇ ಸಹಿತ ಸಂಘ ಪರಿವಾರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.  ಜಗದೀಶ ಕಡೆಗೋಳಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಬಿ.ಸಿ.ರೋಡ್ ಸ್ವಾಗತಿಸಿದರು. ಧರ್ಮೇಶ್ ಬಂಟ್ವಾಳ ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿಂಜಾವೇ ವತಿಯಿಂದ ಬಂಟ್ವಾಳದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*