ಬಂಟ್ವಾಳ: ಹಿಂದು ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಭಾನುವಾರ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ನಡೆಯಿತು.
ಬೆಳಗ್ಗೆ ಗಂಟೆ 9 ರಿಂದ 10ರವರೆಗೆ ನವೋದಯ ಮಿತ್ರ ಕಲಾವೃಂದ ನೆತ್ತರಕೆರೆ ಹಾಗೂ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ಶ್ರೀ ಮಹಾಲಕ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.ಅಯೋಧ್ಯೆ ರಾಮಮಂದಿರ ಸಂಪೂರ್ಣಗೊಳ್ಳುವವರೆಗೆ ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಕರೆ ನೀಡಿದರು. ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿದರು. ಹಿಂಜಾವೇ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿಂಜಾವೇ ಸಹಿತ ಸಂಘ ಪರಿವಾರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಜಗದೀಶ ಕಡೆಗೋಳಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಬಿ.ಸಿ.ರೋಡ್ ಸ್ವಾಗತಿಸಿದರು. ಧರ್ಮೇಶ್ ಬಂಟ್ವಾಳ ವಂದಿಸಿದರು.