ಬಂಟ್ವಾಳ

ಭಾರತ ಬಂದ್ ಗೆ ದ.ಕ.ಜಿಲ್ಲಾ ರೈತ, ದಲಿತ, ಕಾರ್ಮಿಕ, ಜನಪರ ಚಳವಳಿಗಳ ಒಕ್ಕೂಟ ಬೆಂಬಲ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದ ಸಭೆ ಭಾನುವಾರ ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಸಿ.ಐ.ಟಿ.ಯು. ನ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಅದ್ಯಕ್ಷತೆಯಲ್ಲಿ ನಡೆಯಿತು ಡಿ.8ರಂದು ಅಖಿಲ ಭಾರತ ರೈತರ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿದ ಭಾರತ ಬಂದ್ ಗೆ ಸಂಪೂರ್ಣ  ಬೆಂಬಲವಾಗಿ ಜಿಲ್ಲೆಯ ಒಕ್ಕೂಟವು 8ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ನಂತೂರು ಸರ್ಕಲ್ ನಲ್ಲಿ ರಾಸ್ತಾ ರೋಕೊ ಚಳುವಳಿ ನಡೆಸುವ ಮೂಲಕ ಬೆಂಬಲ ನೀಡುವುದಾಗಿ ತೀರ್ಮಾನಿಸಲಾಯಿತು. ರೈತ -ದಲಿತ- ಕಾರ್ಮಿಕ ಐಕ್ಯ ಹೋರಾಟ ವೇದಿಕೆಯಿಂದ ಡಿ.7ರಿಂದ 15ರವರೆಗೆ ಬೆಂಗಳೂರಿನ ಮೌರ್ಯ ವೃತ್ತದ ಬಳಿಯಿರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗ  ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ನಿರಂತರ ಧರಣಿ ಸತ್ಯಾಗ್ರಹಕ್ಕೆ ಜಿಲ್ಲೆಯಿಂದ ನೂರಾರುಜನ ರೈತ ಕಾರ್ಯಕರ್ತರು  ಹಂತ ಹಂತವಾಗಿ ಭಾಗವಹಿಸಲಿದ್ದಾರೆ ಎಂದು  ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ  ಹೇಳಿದರು. ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಯಾದವ ಶೆಟ್ಟಿ ಮತ್ತು ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಒಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಹಾಗೂ ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ