ಜಿಲ್ಲಾ ಸುದ್ದಿ

ಗ್ರಾಪಂ ಚುನಾವಣೆ ಹಿನ್ನೆಲೆ: ಶಸ್ತ್ರಾಸ್ತಗಳ ಠೇವಣಿ ಕುರಿತು ಪರಿಷ್ಕೃತ ಆದೇಶ ಪ್ರಕಟ

ಡಾ. ಕೆ.ವಿ.ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತಿ  ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೊಳಪಟ್ಟ  ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವ  ಎಲ್ಲಾ ಪರವಾನಿಗೆದಾರರು  ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬಂಟ್ವಾಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರವಾನಿಗೆದಾರರು ಡಿಸೆಂಬರ್ 10 ರೊಳಗೆ ಎಲ್ಲಾ ಶಸ್ತ್ರಾಸ್ತ್ರ ಠೇವಣಿಯನ್ನು ಇಡಬೇಕು.
ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬೆಳ್ತಂಗಡಿ, ಸುಳ್ಯ ಪುತ್ತೂರು ಮತ್ತು ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಪರವಾನಿಗೆದಾರರು ಡಿಸೆಂಬರ್ 10 ರೊಳಗೆ ಎಲ್ಲಾ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಬೇಕು.
ಡಿಸೆಂಬರ್ 31 ರಂದು ಠೇವಣಿ ಇಡಲಾದ ಶಸ್ತ್ರಾಸ್ತ್ರಗಳನ್ನುಪೊಲೀಸ್ ಠಾಣೆ / ಅಧೀಕೃತ ಕೋವಿ ಮತ್ತು ಮದ್ದುಗುಂಡು ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು. ಹಿಂದಿನ ಆದೇಶದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪರವಾನಿಗೆದಾರರಿಗೆ  ಬೆಳೆರಕ್ಷಣೆಗಾಗಿ ಶಸ್ತ್ರಾಸ್ತ್ರದ ತೀರಾ ಅವಶ್ಯಕತೆ ಇದ್ದರೆ ಮಾತ್ರ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ. ಇದಕ್ಕೆ ಬದಲಾಗಿ ಪರವಾನಿಗೆದಾರರು ಪ್ರತಿ ತಾಲೂಕುಗಳಲ್ಲಿ (ತಹಶೀಲ್ದಾರರ ಕಚೇರಿ) ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗಳಿಗೆ  ಅಹವಾಲುಗಳನ್ನು ಸಲ್ಲಿಸಬಹುದು. ಈ ಸ್ಕ್ರೀನಿಂಗ್ ಸಮಿತಿಗಳಿಗೆ  ಅರ್ಹ ಪ್ರಕರಣಗಳಲ್ಲಿ ಶಸ್ತ್ರಾಸ್ತ್ರಗಳನ್ನು ಹಾಗೂ ಆತ್ಮ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದ್ದರೆ ಸಂಬಂಧಪಟ್ಟವರು ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago