ಬಂಟ್ವಾಳ

ಸಜೀಪನಡು : ಜ್ಞಾನ ವಿಕಾಸ ಕಾರ್ಯಕ್ರಮ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ ಕ್ಷೇ.ಧ. ಗ್ರಾ. ಯೋ. ಬಿ.ಸಿ. ಟ್ರಸ್ಟ್(ರಿ); ಬಂಟ್ವಾಳ, ಪಾಣೆಮಂಗಳೂರು ವಲಯ ಮತ್ತು ಸರಕಾರಿ ಆಯುಷ್ ಚಿಕಿತ್ಸಾಲಯ ಸಜೀಪ ಮೂಡ ಸಹಭಾಗಿತ್ವದಲ್ಲಿ  ಶ್ರೀ ಜ್ಯೋತಿ ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕ ದಿನಾಚರಣೆ ಮತ್ತು ಮಹಿಳಾ ಸದಸ್ಯರಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು.

ಶ್ರೀಷನ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ದೇರಾಜೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಭವನದ ಆಡಳಿತ ಸಮಿತಿ ಸದಸ್ಯ ಚಂದಪ್ಪ ಭಾಗವಹಿಸಿದರು. ಸರಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪನಡು ವಿನ ಆಯುಷ್ ವೈದ್ಯ ಅಧಿಕಾರಿ ಡಾಕ್ಟರ್ ಮಣಿಕರ್ಣಿಕಾ ಆಯುಷ್ ಇಲಾಖೆಯ ಮೂಲಕ ಸಿಗುವ ವೈದ್ಯಕೀಯ ಸೌಲಭ್ಯಗಳನ್ನು ಬಳಸಿ ಕೊಳ್ಳುವಂತೆ ತಿಳಿಸಿದರು.

ಜಾಹೀರಾತು

ಸಜೀಪ ನಡು ಹಿರಿಯ ಆರೋಗ್ಯ ಸಹಾಯಕಿ  ಜಲಜಾಕ್ಷಿ, ಆಯುಷ್ ಇಲಾಖೆ ಆರೋಗ್ಯ ಸಹಾಯಕಿ ಸಬಿತ ಸಂಪನ್ಮೂಲ ವ್ಯಕ್ತಿಯಾಗಿ ಮಹಿಳೆಯರ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸರಕಾರಿ ಆಯುರ್ವೇದ ಚಿಕಿತ್ಸಾಲಯ ಸಜೀಪ ಮೂಡ ಯೋಗ ತರಬೇತುದಾರ ವಿನಾಯಕಕೃಷ್ಣ ಅವರು ಯೋಗ ದ  ಮೂಲಕ ಆರೋಗ್ಯರಕ್ಷಣೆಯ ಸಹಜ ವಿಧಾನಗಳ ಬಗ್ಗೆ ವಿವರಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಪ್ನಾ ಪ್ರಾಸ್ತಾವಿಕ ಮಾತನಾಡಿದರು. ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಅಮಿತ ನಿರೂಪಣೆಯಲ್ಲಿ ನಿಶ್ಮಿತಾ ಸ್ವಾಗತಿಸಿ ಸೇವಾ ಪ್ರತಿನಿಧಿ ಶಕೀಲಾ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago