ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆಯ ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಪ್ರಯುಕ್ತ ನಡೆದ ‘ಬಿ.ಎ. ಸಂಗಮ’ ಸಮಾರಂಭ ಹಾಗೂ ಬಿ.ಎ. ಗ್ರೂಪ್ ತುಂಬೆ ಸಂಸ್ಥಾಪಕ ದಿ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರ ಅನುಸ್ಮರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಾತನಾಡಿದ ಬಿ.ಎ. ಗ್ರೂಪ್ ತುಂಬೆ ಮತ್ತು ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ತುಂಬೆ ಇದರ ಆಡಳಿತ ನಿರ್ದೇಶಕ ಬಿ.ಅಬ್ದುಲ್ ಸಲಾಂ, ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದೇಶ ಮತ್ತು ವಿದೇಶಗಳ ವಿವಿಧ ಕಂಪೆನಿಗಳಲ್ಲಿ ಉತ್ತಮ ಬೇಡಿಕೆ ಇದ್ದು ಈಗಾಗಲೇ ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ವಿದೇಶಗಳ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ಎಂದರು.ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಕ ಅಧಿಕಾರಿ ಬಿ.ಜಯಕರ ಶೆಟ್ಟಿ, ತುಂಬೆ ಬಿ.ಎ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗಾಧರ ಆಳ್ವಾ, ಮಂಗಳೂರು ಜ್ಞಾನ ರತ್ನ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಸಂತ ಅಲೋಶಿಯಸ್ ಐಟಿಐಯ ಪ್ರಾಂಶುಪಾಲ ರೋಷನ್ ಡಿಸೋಜ, ಉದ್ಯಮಿ ಅಸ್ಲಮ್ ಶೇಠ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಐಟಿಐಯ ಪ್ರಾಂಶುಪಾಲ ನವೀನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಗಾಯತ್ರಿ ಸ್ವಾಗತಿಸಿದರು. ಸಂದೀಪ್ ಧನ್ಯವಾದಗೈದರು. ರಾಜೇಶ್ ಟಿ. ಕಾರ್ಯಕ್ರಮ ನಿರೂಪಿಸಿದರು.
Be the first to comment on "ತುಂಬೆಯಲ್ಲಿ ಬಿ.ಎ.ಸಂಗಮ, ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅನುಸ್ಮರಣೆ"