ಫರಂಗಿಪೇಟೆ

ಫರಂಗಿಪೇಟೆಯಲ್ಲಿ ಅಪಘಾತ: ವಿಟ್ಲದ ವ್ಯಕ್ತಿ ಮೃತ

ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಇಳಿಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ವಿಟ್ಲದ ಜನಪ್ರಿಯ ಬಾಣಸಿಗರಾದ ಕಾಂತಡ್ಕ ಶಂಕರನಾರಾಯಣ ಭಟ್ (58) ಸಾವನ್ನಪ್ಪಿದ್ದಾರೆ.

ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಆಗಮಿಸುತ್ತಿದ್ದ ಅವರ ಬೈಕ್ ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಅಸು ನೀಗಿದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅವರು ಹೊಂದಿದ್ದರು. ವಿಟ್ಲ ಪರಿಸರದ ಪ್ರಖ್ಯಾತ ಬಾಣಸಿಗರಾಗಿದ್ದ ಅವರು, ಹಲವಾರು ದೇವಸ್ಥಾನಗಳ ದೊಡ್ಡ ಪ್ರಮಾಣದ ಅಡುಗೆಯನ್ನು ಮಾಡುವುದರಲ್ಲಿ ನಿಷ್ಣಾತರಾಗಿದ್ದರು. ವಿಟ್ಲ ಸಮೀಪ ನೆತ್ತರಕೆರೆ ಎಂಬಲ್ಲಿನ ಪಾಂಚಜನ್ಯ ಲೇಔಟ್ ನಲ್ಲಿ ವಾಸವಾಗಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts