ವಿಟ್ಲ

ಅಳಿಕೆಯಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಅಳಿಕೆಯಲ್ಲಿ ಅಡುಗೆ ಸಹಾಯಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಬೆದ್ರಡ್ಕ ನಿವಾಸಿ ನಾರಾಯಣ ಪಾಟಾಲಿ(55) ಮೃತಪಟ್ಟವರು. ಇವರು ಸ್ಥಳೀಯ ಹಾಸ್ಟೇಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.   ಗುರುವಾರ ತಡರಾತ್ರಿಯಿಂದ ಅವರು ನಾಪತ್ತೆಯಾಗಿದ್ದರು. ಅವರನ್ನು ಹುಡುಕಾಡಿದಾಗ ಕೆರೆಯ ಬಳಿ ಅವರ ಚಪ್ಪಲಿ ಪತ್ತೆಯಾಗಿತ್ತು. ಕೆರೆಯಲ್ಲಿ ಸುಮಾರು ಇಪ್ಪತ್ತೆರಡು ಅಡಿಗಿಂತಲೂ ಅಧಿಕ ನೀರು ತುಂಬಿಕೊಂಡಿದ್ದು,  ಫ್ರೆಂಡ್ಸ್ ವಿಟ್ದ ಸಂಘಟನೆಯ ಮುರಳೀಧರ ಮತ್ತು ಹೈದರಾಲಿ ಮೇಗಿನಪೇಟೆ  ನೇತೃತ್ವದ ಮುಳುಗು ತಜ್ಞರ ತಂಡ ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಮೃತಶರೀರವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಕಳೆದ 25 ವರ್ಷಗಳಿಂದ ಮೂರ್ಚೆ ರೋಗದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts