ವಿಟ್ಲ

ಸಿಡಿಲಾಘಾತ: ಕರೋಪಾಡಿಯಲ್ಲಿ ವ್ಯಕ್ತಿ ಮೃತ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಚಂದಪ್ಪ ಮೂಲ್ಯ ಮೃತಪಟ್ಟವರು.

ರಾತ್ರಿಯ ಬಳಿಕ  ಗುಡುಗು ಸಿಡಿಲು ಇತ್ತು. ಈ ಸಂದರ್ಭ ಮನೆಗೆ ಸಿಡಿಲು ಬಡಿದಿದೆ, ಸುಮಾರು 12.30ರ ಬಳಿಕ ಘಟನೆ ನಡೆದಿದ್ದು, ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು  ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದೇ ಸಂದರ್ಭ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿವೆ.  ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಕಂದಾಯ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts