ಬಂಟ್ಚಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ ಸಹಯೋಗದಲ್ಲಿ ಫಿಟ್ ಇಂಡಿಯಾ ಶಾಲಾ ಸಪ್ತಾಹಕ್ಕೆ ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸದೃಢ ಮನಸ್ಸು ಮತ್ತು ದೇಹ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮಕ್ಕಳ ಮಾನಸಿಕ ವಿಕಾಸವಾಗಬೇಕಾದರೆ ದೈಹಿಕ ಶಿಕ್ಷಣ ಅಗತ್ಯ. ಬಂಟ್ವಾಳ ತಾಲೂಕಿನಲ್ಲಿ ಫಿಟ್ ಇಂಡಿಯಾ ಶಾಲಾ ಸಪ್ತಾಹದನ್ವಯ ಮಕ್ಕಳ ದೈಹಿಕ ಶಿಕ್ಷಣದ ಚಟುವಟಿಕೆಗಳ ಕುರಿತು ಆನ್ ಲೈನ್ ಮೂಲಕ ಮಾಹಿತಿ ನೀಡುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ವಿದ್ಯಾರ್ಥಿಗಳು ಮಾನಸಿಕವಾಗಿ, ದೈಹಿಕವಾಗಿ ಸದೃಡವಾಗುವುದರ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕರ ಮಹತ್ವದ ಪಾತ್ರವಿದೆ ಎಂದರು.
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಜೆ. ಪ್ರಹ್ಲಾದ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಣಾಧಿಕಾರಿ ರತ್ನಾವತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಸಂತೋಷ್, ಭಡ್ತಿ ಹೊಂದಿದ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲೋಕೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಜಗದೀಶ್, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಇಂದುಶೇಖರ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ರಾಘವೇಂದ್ರ ಬಲ್ಲಾಳ,
ಶಿಕ್ಷಣ ಸಂಯೋಜಕಿಯರಾದ ಸುಜಾತಾ, ಸುಧಾ, ಯುವಜನ ಸೇವಾ ಕ್ರೀಡಾಧಿಕಾರಿ ನವೀನ್ ಪಿ.ಎಸ್. ಪಾಣೆಮಂಗಳೂರು ಶಾರದಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಭೋಜ, ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ
ಜಯರಾಮ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ ಜಾಲ್ಸೂರು ಸ್ವಾಗತಿಸಿದರು. ಉಪಾಧ್ಯಕ್ಷ ಜಗದೀಶ್ ವಂದಿಸಿದರು. ಶಿಕ್ಷಕ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.