ಬಂಟ್ವಾಳ: ಓಮ್ನಿ ಕಾರು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ವೀರಕಂಭದಲ್ಲಿ ಮಂಗಳವಾರ ನಡೆದಿದೆ. ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಪರಿಣಾಮ ವೀರಕಂಬ ಗ್ರಾಮ ಪಂಚಾಯತ್ ಕಚೇರಿಯ ಸಮೀಪ ಇರುವ ಪ್ರಪಾತಕ್ಕೆ ಉರಳಿತು. ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳಿದ್ದು, ಸಣ್ಣುಪುಟ್ಟ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಓಮ್ನಿ ಕಾರಿನಲ್ಲಿದ್ದವರು ಮಾರಿಪಳ್ಳ ನಿವಾಸಿಗಳಾಗಿದ್ದು, ವಿಟ್ಲದ ಒಕ್ಕೆತ್ತೂರು ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ, ಕೆಲವು ವರ್ಷಗಳ ಹಿಂದೆ ಇದೇ ಪ್ರಪಾತಕ್ಕೆ ಜೀಪೊಂದು ಉರುಳಿ ಬಿದ್ದಿತ್ತು. ಇಲ್ಲಿ ತಡೆಗೋಡೆ ನಿರ್ಮಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.