




ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮೆಸ್ಕಾಂ ನೀತಿಯನ್ನು ವಿರೋಧಿಸಿ ವಿಟ್ಲದಲ್ಲಿ ಪ್ರತಿಭಟನೆ ಬುಧವಾರ ನಡೆಯಿತು. ಮುಖಂಡರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ಸಾಮಾನ್ಯರು ಸೋತಾಗ ಸರ್ಕಾರ ಅವರ ನೆರವಿಗೆ ಬರಬೇಕು. ಅದನ್ನು ಬಿಟ್ಟು ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ದೂರಿದರು. ಜಿಲ್ಲಾ ಕಾರ್ಮಿಕ ಮುಖಂಡ ಬಿ.ಎಂ ಭಟ್ ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ ಎಂದರು. ವಿನೋದ್ ಭಟ್ ಪಾದೆಕಲ್ಲು ಅವರು ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕವಾಗಿ ಕೆಲವು ಪ್ರಶ್ನೆಗಳನ್ನು ಕೇಳಿದರು. ಇಲಾಖಾಧಿಕಾರಿಗಳು ಉತ್ತರ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ರೈತ ಸಂಘದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರು, ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಪುಚ್ಚತ್ತಡ್ಕ, ಗೌರವಾಧ್ಯಕ್ಷ ಹರ್ಷಕುಮಾರ್ ಹೆಗ್ಡೆ, ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಉಪಸ್ಥಿತರಿದ್ದರು.
Be the first to comment on "ಮೆಸ್ಕಾಂ ನೀತಿ ವಿರೋಧಿಸಿ ವಿಟ್ಲದಲ್ಲಿ ಪ್ರತಿಭಟನೆ"