ಬಂಟ್ವಾಳ

ಕೈತ್ರೋಡಿ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗದಲ್ಲಿ ಆನಂದ ಗುರೂಜಿ ಭಾಗಿ

ಬಂಟ್ವಾಳ: ಜಗತ್ತಿಗೆ ಮಹಾಮಾರಿಯಾಗಿ ಕಾಡಿದ ಕೊರೋನದಂತಹ ಸಂಕಷ್ಟಗಳನ್ನು ದೂರಗೊಳಿಸಿ ಜನತೆಗೆ ಬದುಕಿನಲ್ಲಿ ಸಮೃದ್ಧಿ ಕಾಣಲು  ದೇವಿ ಆರಾಧನೆಯಿಂದ ಸಾಧ್ಯವಿದೆ ಎಂದು ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಹೇಳಿದ್ದಾರೆ.

ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್  ಶ್ರೀ ಮಂತ್ರದೇವತೆ,ಕೊರಗಜ್ಜ ಕ್ಷೇತ್ರದಲ್ಲಿ ಮಂಗಳವಾರ ನಡೆದ ಚಂಡಿಕಾಯಾಗಕ್ಕೆ  ಪೂರ್ಣಾಹುತಿ ನೆರವೇರಿಸಿದ ಬಳಿಕ ಅವರು ಆಶೀರ್ವಚನ ನೀಡಿದರು.  ಕೊರಗಜ್ಜ ದೈವ ಭಕ್ತರ ಸಂಕಷ್ಟ ಕಳೆಯಲು ಭಕ್ತಿಗೆ ತ್ವರಿತವಾಗಿ ಒಲಿಯುತ್ತಾನೆ ಎಂದರು.

ಕಟೀಲು ಕ್ಷೇತ್ರದ ವೇದಮೂರ್ತಿ ಕಮಲಾದೇವಿ ಅಸ್ರಣ್ಣ ಮಾತನಾಡಿ, ಚಂಡಿಕಾಯಾಗದಿಂದ ಸಮಸ್ತ ಭಕ್ತರಿಗೆ ಒಳಿತು ಉಂಟಾಗುತ್ತದೆ ಎಂದರು. ವೇದಮೂರ್ತಿ ಸುಬ್ರಹ್ಮಣ್ಯ ಪರಾಡ್ಕರ್ ಗುಂಡ್ಯಡ್ಕ ಮತ್ತು ರಾಧಾಕೃಷ್ಣ ಭಟ್ ಪೆದಮಲೆ ಮಾರ್ಗದರ್ಶನದಲ್ಲಿ ಚಂಡಿಕಾಯಾಗ ನೆರವೇರಿತು.ಇದೇ ವೇಳೆ ಕೊರಗಜ್ಜ ಭಕ್ತಿಗೀತೆ ಹಾಡಿ ಗಮನ ಸೆಳೆದ ಬಾಲ ಪ್ರತಿಭೆ ಕಾರ್ತಿಕ್ ಕಾರ್ಕಳ ಮತ್ತು ಅಶ್ವಥ ಎಲೆಯಲ್ಲಿ ಚಿತ್ರ ರಚಿಸಿದ ತಿಲಕ್ ಕುಲಾಲ್ ಮೂಡಬಿದ್ರಿ, ಸಂಘಟಕ ಚಂದಪ್ಪ ಪೂಜಾರಿ ಇವರನ್ನು ಗುರೂಜಿ  ಸನ್ಮಾನಿಸಿದರು. ಕ್ಷೇತ್ರದ ಧರ್ಮದರ್ಶಿ ಲೋಕೇಶ್ ದಂಪತಿ ಮತ್ತಿತರರು ಇದ್ದರು. ಜಗದೀಶ ಕೊಯಿಲ ಸ್ವಾಗತಿಸಿ, ಪ್ರತೀಶ್ ಗೌರೀಶ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.ಇದಕ್ಕು ಮುನ್ನ ಚೆಂಡೆ ವಾದ್ಯ, ಕಳಶ  ಸಹಿತ ಆಕರ್ಷಕ ಮೆರವಣಿಗೆ ನಡೆಯಿತು. 

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts