ವಿಟ್ಲ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಸ್ತಬ್ದ: ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಯು.ಟಿ.ಖಾದರ್

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಬದಲಾಗಿ ಕಾಂಗ್ರೆಸ್ ಜಾರಿಗೆ ತಂದ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಲಾಗಿದೆ ಎಂದು ವಿಟ್ಲದಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ಮತದಾರರು ನೀಡುವ ಪ್ರತಿಯೊಂದು ಮತವೂ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದರು. ರೇಶನ್ ಕಾರ್ಡ್ ವಿತರಣೆಯಾಗಿಲ್ಲ. ಮನೆ ಹಸ್ತಾಂತರ ಮಾಡಿಲ್ಲ. ಪಿಂಚಣಿ ಕೂಡಾ ಬಡವರಿಗೆ ದೊರೆಯುತ್ತಿಲ್ಲ. ಮರಾಠಿ ನಿಗಮ ಸ್ಥಾಪಿಸಲು ನಮ್ಮ ವಿರೋಧವಿಲ್ಲ. ಆದರೆ ಗಡಿಭಾಗದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದಾದ ಬಳಿಕ ನಿಗಮ ಮಂಡಳಿ ಸ್ಥಾಪನೆ ಮಾಡಲಿ ಎಂದು ಆಗ್ರಹಿಸಿದರು. ಯಾವುದೇ ಘಟನೆ ನಡೆದಾಗ ಕಾಂಗ್ರೆಸ್ ಪಕ್ಷವನ್ನು ದೂರುವುದು ಬಿಜೆಪಿಗೆ ಮಾಮೂಲಾಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರಿಗೆ ಅಲ್ಲಿ ತ್ರೀಶಂಕು ಸ್ಥಿತಿ ನಿರ್ಮಾಣಗೊಂಡು ಮತ್ತೆ ನಮ್ಮ ಪಕ್ಷಕ್ಕೆ ಮರಳಲಿದ್ದಾರೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಲೀಂ, ಗಿರೀಶ್ ಶೆಟ್ಟಿ, ಲತೀಫ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿವಿಧ ವಲಯ ಕಾಂಗ್ರೆಸ್ ಅಧ್ಯಕ್ಷರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts