ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಯುವ ಸೌರಭ

ಬಂಟ್ವಾಳ: ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಯುವ ಸೌರಭ ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರಲ್ಲಿ ಬುಧವಾರ ಅಯೋಜಿಸಲಾಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮತ್ತು ಸಂಸ್ಥೆಯ ಸಂಚಾಲಕ ವಸಂತ ಮಾಧವ  ಉಪಸ್ಥಿತರಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವಿ ವಿದ್ಯಾರ್ಥಿಗಳು ಹಾಗೂ ಕಲಾವಿದರು ಭರತನಾಟ್ಯ, ನೃತ್ಯ ರೂಪಕ, ಹರಿಕಥೆ, ಕಂಗಿಲು ನೃತ್ಯ, ಹಾಲಾಕ್ಕಿ ನೃತ್ಯ, ಹುಲಿಕುಣಿತ, ಸುಗಮ ಸಂಗೀತ ಮುಂತಾದ ಮನೋರಂಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ವಿದ್ಯಾರ್ಥಿ ಸಂಘದ ಉದ್ಘಾಟನೆಯೂ ನಡೆಯಿತು. 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ