ಬಂಟ್ವಾಳ

ಆರ್.ಎನ್.ಶೆಟ್ಟಿ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ: ರಮಾನಾಥ ರೈ

ಬಂಟ್ವಾಳ: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ‌ ಸಂಸ್ಥೆಗಳ ಸಮೂಹದ ಸ್ಥಾಪಕ‌ ಆರ್.ಎನ್. ಶೆಟ್ಟಿ ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಆತ್ಮೀಯರಲ್ಲಿ ಒಬ್ಬರಾಗಿದ್ದ ಅವರ ಅಗಲಿಕೆಯಿಂದ ನನಗೆ ವೈಯಕ್ತಿಕವಾಗಿ ಅತೀವ ನೋವುಂಟಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ರಾಜ್ಯದ ಶಿಕ್ಷಣ ಮತ್ತು ಉದ್ಯಮ ರಂಗಗಳಲ್ಲಿ ಗಣನೀಯ ಸಾಧನೆ ಮಾಡಿದ್ದರು.‌ ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪೂರ್ವವಾದುದು. ರಾಜ್ಯದ ಹಲವು ಜಲಾಶಯಗಳ ನಿರ್ಮಾಣ ಕಾಮಗಾರಿಗಳನ್ನು ನಿರ್ವಹಿಸಿದ್ದ ಶೆಟ್ಟಿ ಅವರು, ಕರ್ನಾಟಕದ ಪ್ರಗತಿಗೆ ಮಹತ್ವದ ಕೊಡುಗೆಗಳನ್ನು ನೀಡಿದವರು ಎಂದವರು ಶ್ರದ್ಧಾಂಜಲಿ ವ್ಯಕ್ತಪಡಿಸಿದ್ದಾರೆ.

ಕೊಡುಗೈ ದಾನಿಯಾಗಿದ್ದ ಆರ್.ಎನ್. ಶೆಟ್ಟಿ ಅವರು ಜಾತಿ, ಮತಗಳ ಭೇದವಿಲ್ಲದೆ ಸಹಾಯ ಕೇಳಿ ಬಂದ ಎಲ್ಲರಿಗೂ ನೆರವು ನೀಡುವ ಗುಣ ಹೊಂದಿದ್ದವರು. ಬಂಟ ಸಮುದಾಯದ ಪ್ರಗತಿಗೆ ಅವರ ಕೊಡುಗೆ ಅಪಾರವಾದುದು. ಜನಸ್ನೇಹಿ, ದೂರದೃಷ್ಟಿಯ ವ್ಯಕ್ತಿಯಾಗಿದ್ದ ಆರ್.ಎನ್.‌ಶೆಟ್ಟಿ ಅವರನ್ನು ಕಳೆದುಕೊಂಡು ನಾಡು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಮತ್ತು ಕುಟುಂಬದವರಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ರೈ ಕಂಬನಿ ಮಿಡಿದಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ