ಬಂಟ್ವಾಳ

ಚುನಾವಣೆ ಹಿನ್ನೆಲೆ: ಮೊಡಂಕಾಪಿನಲ್ಲಿ ಅಧಿಕಾರಿಗಳ ಮಟ್ಟದ ತರಬೇತಿ

ಬಂಟ್ವಾಳ: ಡಿ.22ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಗುರುವಾರ ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗಗಳಲ್ಲಿ ನಡೆಯಿತು.

ಒಟ್ಟು 57 ಗ್ರಾಮ ಪಂಚಾಯಿತಿಗಳ 822 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೆಚ್ಚುವರಿ ಮತಗಟ್ಟೆಗಳೂ ಸೇರಿದಂತೆ 436 ಮತಗಟ್ಟೆಗಳ 872 ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು.

ಎರಡೂ ಶಾಲೆಗಳ 22 ಕೊಠಡಿಗಳಲ್ಲಿ ಮಾಸ್ಟರ್ ಟ್ರೈನರ್ಸ್ ಗಳಾದ ಮೋಹನ್ ಎನ್, ಉದಯ ಕುಮಾರ್, ಸತನ್ ರಾಮ್ ಮಾರ್ಗದರ್ಶನದಲ್ಲಿ  44 ಚುನಾವಣಾಧಿಕಾರಿಗಳು ತರಬೇತಿ ನೀಡಿದರು. ತಹಸೀಲ್ದಾರ್ ರಶ್ಮಿ ಎಸ್.ಆರ್, ಚುನಾವಣಾ ಶಾಖೆಯ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಸಹಿತ ಕಂದಾಯ ಇಲಾಖಾಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಇದೇ ವೇಳೆ ಅಂಚೆ ಮತಪತ್ರದ ಸಿದ್ಧತೆಗಳನ್ನೂ ಮಾಡಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ