ಬಂಟ್ವಾಳ: ಡಿ.22ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯ ಡಿ.30ರಂದು ನಡೆಯಲಿದ್ದು ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಮಸ್ಟರಿಂಗ್ ಡಿ’ ಮಸ್ಟರಿಂಗ್
ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿಗೆ ಶುಕ್ರವಾರ ಚುನಾವಣಾ ವೀಕ್ಷಕರಾದ ಶಾಂತರಾಜು ವೈ.ಬಿ. ಆಗಮಿಸಿ ಪರಿಶೀಲನೆ ನಡೆಸಿದರು. ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಚುನಾವಣೆ ಪ್ರಥಮ ದರ್ಜೆ ಸಹಾಯಕರಾದ ರಾಜ್ ಕುಮಾರ್,ಕಾರ್ತಿಕ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಸಿಬ್ಬಂದಿ ಸದಾಶಿವ ಕೈಕಂಬ, ಶೀತಲ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…