ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಅರವಿಂದ್ ಭಟ್ ಪದ್ಯಾಣ, ಆಲಾಡಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.
ಬಂಟ್ವಾಳ ತಾಲೂಕಿನ ಸಜೀಪ ಮಾಗಣೆಯ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿಯನ್ನು ಕ್ಷೇತ್ರದ ಆಡಳಿತಾಧಿಕಾರಿಯಾಗಿರುವ ತಾರಾನಾಥ್ ಸಾಲ್ಯಾನ್ ಮತ್ತು ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶದಂತೆ ರಚಿಸಲಾಯಿತು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅರವಿಂದ್ ಭಟ್ ಪದ್ಯಾಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಮಹೇಶ್ ಭಟ್, ಯಶವಂತ ದೇರಾಜೆ, ಅರುಣ್ ಕುಮಾರ್ ಕುಕ್ಕುದಕಟ್ಟೆ, ಮೋಹನ್ ದಾಸ್ ಹೆಗ್ಡೆ ನಗ್ರಿ, ದೇವಪ್ಪ ನಾಯ್ಕ ದಾಸರಗುಡ್ಡೆ, ಜಯಶ್ರೀ ಅಶೋಕ್ ಗಟ್ಟಿ ನಂದಾವರ, ಕವಿತಾ ವಸಂತ ಪೆರಾಜೆ ಸಜೀಪ ನಡು, ಗಣೇಶ್ ಕಾರಾಜೆ ಇವರುಗಳು ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರುಗಳಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಈ ಹಿಂದಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದ ಎ.ಸಿ ಭಂಡಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಹೋರಾಟಗಾರ ಮತ್ತು ಮಾಗಣೆಯ ತಂತ್ರಿಗಳಾದ ಸುಬ್ರಹ್ಮಣ್ಯ ಭಟ್ ಮಂಜಿನಡ್ಕ ಇವರನ್ನು ನೂತನ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ಇದ್ದರು.
Be the first to comment on "ನಂದಾವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಅರವಿಂದ ಭಟ್ ಪದ್ಯಾಣ ಆಯ್ಕೆ, ನೂತನ ಸಮಿತಿ ಅಧಿಕಾರ ಸ್ವೀಕಾರ"