ಬಂಟ್ವಾಳ: ಗ್ರಾಪಂ ಚುನಾವಣೆಯ ಹಿನ್ನಲೆಯಲ್ಲಿ ಬಸ್ಸುಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಿರುವುದರಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಡಿ.21ಮತ್ತು 22 ರಂದು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಟಾಗಲಿದೆ ಎಂದು ಕೆ.ಎಸ್.ಆರ್.ಟಿ.ಸಿ. ಬಿ.ಸಿ.ರೋಡ್ ಘಟಕದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬಿ.ಸಿ.ರೋಡ್ ಘಟಕದಿಂದ ಬಸ್ ಗಳನ್ನು ಚುನಾವಣಾ ಕರ್ತವ್ಯಕ್ಕೆ ಒದಗಿಸಬೇಕಾಗಿರುವುದರಿಂದ ತಾಲೂಕಿನ ಸ್ಥಳೀಯ ಮತ್ತು ಗ್ರಾಮಾಂತರ ಸಾರಿಗೆ ಹಾಗೂ ಉಪ್ಪಳ,ಬದಿಯಡ್ಕ, ಕಾಸರಗೋಡು ರೂಟ್ ನಲ್ಲಿ ಸಂಚರಿಸುವ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು,ಪ್ರಯಾಣಿಕರು ಸಹಕರಿಸುವಂತೆ ಅವರು ಕೋರಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…