ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿಬೈಲು ಮನೆತನದ ಹಿರಿಯ ವ್ಯಕ್ತಿ ಶತಾಯುಷಿ ನೂಜಿಬೈಲು ಈಶ್ವರ ಭಟ್ (101) ಸ್ವಗೃಹದಲ್ಲಿ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು. ಅವರಿಗೆ ಮೂರು ಗಂಡು, ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಕೃಷಿಕರಾಗಿ, ಮಾರ್ಗದರ್ಶಕರಾಗಿ, ಸಮಾಜದ ಗಣ್ಯ ವ್ಯಕ್ತಿಯಾಗಿ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಮಂಚಿ ಸರ್ಕಾರಿ ಪ್ರೌಢಶಾಲೆಯ ಸ್ಥಾಪಕರಲ್ಲೊಬ್ಬರಾಗಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೂರು ದಶಕಗಳಷ್ಟು ಕಾಲ ನೂಜಿಬೈಲು ಹಿರಿಯ ಪ್ರಾಥಮಿಕ ಶಾಲೆ ಸಂಚಾಲಕರಾಗಿದ್ದ ಅವರು ಜನಾನುರಾಗಿಯಾಗಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…