ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ -2020 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮಂಗಳೂರು, ಮೂಡುಬಿದ್ರೆ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಡಿಸೆಂಬರ್ 20 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರಂದು ಮಧ್ಯರಾತ್ರಿ 12 ಗಂಟೆಯವರಗೆ ಹಾಗೂ ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಮಧ್ಯರಾತ್ರಿ 12 ಗಂಟೆವರೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತ್ತು ಮತ ಎಣಿಕೆಯ ಸಲುವಾಗಿ ಡಿಸೆಂಬರ್ 29 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 30 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ನಡೆಯುವ ಪ್ರದೇಶದ 5 ಕಿ.ಮೀ ವ್ಯಾಪ್ತಿಯನ್ನು ಮದ್ಯ ಮುಕ್ತ ದಿನಗಳೆಂದು ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧಧ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧಧ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿರುತ್ತಾರೆ.
ಈ ದಿನಗಳಲ್ಲಿ ಚುನವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲ್‍ಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ ಸ್ಟಾರ್ ಹೊಟೇಲ್‍ಗಳಲ್ಲಾಗಲೀ ವ್ಯಾಪ್ತಿಗೊಳಪಟ್ಟ ವೈನ್ ಶಾಪ್, ಬಾರ್‍ಗಳಲ್ಲಿ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಕೂಡ ನಿಷೇಧಿಸಲಾಗಿದೆ.
Be the first to comment on "ಗ್ರಾ.ಪಂ ಚುನಾವಣೆ – ಮದ್ಯದಂಗಡಿ ಬಂದ್"