ಬಂಟ್ವಾಳ

ಗ್ರಾ.ಪಂ ಚುನಾವಣೆ – ಮದ್ಯದಂಗಡಿ ಬಂದ್

ಎಚ್ಚರಿಕೆ: ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ. (ಇದು ಸಾಂದರ್ಭಿಕ ಚಿತ್ರ)

ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ  -2020 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮಂಗಳೂರು, ಮೂಡುಬಿದ್ರೆ ಮತ್ತು ಬಂಟ್ವಾಳ ತಾಲೂಕುಗಳಲ್ಲಿ  ಡಿಸೆಂಬರ್ 20 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರಂದು ಮಧ್ಯರಾತ್ರಿ 12 ಗಂಟೆಯವರಗೆ ಹಾಗೂ ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಮಧ್ಯರಾತ್ರಿ 12 ಗಂಟೆವರೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತ್ತು ಮತ ಎಣಿಕೆಯ ಸಲುವಾಗಿ ಡಿಸೆಂಬರ್ 29 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 30 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ನಡೆಯುವ ಪ್ರದೇಶದ  5 ಕಿ.ಮೀ ವ್ಯಾಪ್ತಿಯನ್ನು ಮದ್ಯ ಮುಕ್ತ ದಿನಗಳೆಂದು ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧಧ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧಧ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿರುತ್ತಾರೆ.
   ಈ ದಿನಗಳಲ್ಲಿ ಚುನವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲ್‍ಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ ಸ್ಟಾರ್ ಹೊಟೇಲ್‍ಗಳಲ್ಲಾಗಲೀ ವ್ಯಾಪ್ತಿಗೊಳಪಟ್ಟ ವೈನ್ ಶಾಪ್, ಬಾರ್‍ಗಳಲ್ಲಿ  ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಕೂಡ ನಿಷೇಧಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ