ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ನಸುಕಿನ ಜಾವ ನುಗ್ಗಿ ಮನೆಯ ಯಜಮಾನ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗನಗದು ದೋಚಿದ್ದಾರೆ.
ಕೂಡಿ ಹಾಕಿ ಹಲ್ಲೆ ನಡೆಸಿದ ಸಂದರ್ಭ ತುಕ್ರಪ್ಪ ಶೆಟ್ಟಿ ಯವರ ಪತ್ನಿಗೆ ಕತ್ತಿಯಿಂದ ಇರಿದ ತೀವ್ರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮನೆಯಲ್ಲಿ ಪತಿ , ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದರು.
ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ಈ ದರೋಡೆ ನಡೆಸಿದ್ದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ತಂಡ ಬೆಳಗ್ಗಿನ ಜಾವ ಪರಾರಿಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೆ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…