ಪ್ರಮುಖ ಸುದ್ದಿಗಳು

ಸೌತಡ್ಕ ಸಮೀಪ ಮನೆಮಂದಿ ಹಲ್ಲೆ ನಡೆಸಿ, ಕಟ್ಟಿಹಾಕಿ ದರೋಡೆ, ಸೋಮವಾರ ನಸುಕಿನ ಜಾವ ನಡೆದ ಘಟನೆ

ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ನಸುಕಿನ ಜಾವ ನುಗ್ಗಿ ಮನೆಯ ಯಜಮಾನ ಮತ್ತು ಅವರ‌ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗನಗದು ದೋಚಿದ್ದಾರೆ.

ಕೂಡಿ ಹಾಕಿ  ಹಲ್ಲೆ ನಡೆಸಿದ ಸಂದರ್ಭ ತುಕ್ರಪ್ಪ ಶೆಟ್ಟಿ ಯವರ ಪತ್ನಿಗೆ ಕತ್ತಿಯಿಂದ ಇರಿದ ತೀವ್ರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮನೆಯಲ್ಲಿ ಪತಿ , ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದರು.

ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ಈ ದರೋಡೆ ನಡೆಸಿದ್ದು ಲಕ್ಷಾಂತರ ರೂ ಮೌಲ್ಯದ  ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ತಂಡ ಬೆಳಗ್ಗಿನ ಜಾವ ಪರಾರಿಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೆ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ