Categories: Uncategorized

ಬಂಟ್ವಾಳದಲ್ಲಿ ಉತ್ತಮ ಮತದಾನ: ಶೇ.77.7 ಮಂದಿ ಹಕ್ಕು ಚಲಾವಣೆ

ಮೊದಲ ಮತಪೆಟ್ಟಿಗೆ ಮೊಡಂಕಾಪು ಕೇಂದ್ರಕ್ಕೆ ಆಗಮಿಸಿದ ಸಂದರ್ಭ… ಸಹಾಯಕ ಕಮೀಷನರ್ ಮದನ್ ಮೋಹನ್ ಮತ್ತು ತಹಸೀಲ್ದಾರ್ ಅನಿತಾಲಕ್ಷ್ಮೀ ಈ ಸಂದರ್ಭ ಉಪಸ್ಥಿತರಿದ್ದರು.

 ಬಂಟ್ವಾಳ ತಾಲೂಕಿನ 57 ಗ್ರಾಪಂಗಳ 822 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.77.7 ಮತದಾನವಾಗಿದೆ.ಮಂಗಳವಾರ ಸಂಜೆ ಚುನಾವಣಾ ಶಾಖೆಯ ಕಂಟ್ರೋಲ್ ರೂಮ್ ನೀಡಿದ ಮಾಹಿತಿ ಪ್ರಕಾರ, ಒಟ್ಟು 2,77,133 ಮತದಾರರ ಪೈಕಿ 2,15,535 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 1,04,156 ಪುರುಷರು, 1,11,376 ಮಹಿಳೆಯರು ಹಾಗೂ 3 ಇತರರು. ಮತದಾನ ಪೂರ್ಣಗೊಂಡ ಕೂಡಲೇ ಮತಪೆಟ್ಟಿಗೆಗಳನ್ನು ಭದ್ರಪಡಿಸಿ, ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿರುವ ಮೂರು ಸ್ಟ್ರಾಂಗ್ ರೂಮ್ ಗಳಿಗೆ ತರಲಾಗಿದೆ. ಮಂಗಳೂರು ಸಹಾಯಕ ಕಮೀಷನರ್ ಮದನ್‌ಮೋಹನ್ ಸಿ, ತಹಶೀಲ್ದಾರ್ ಅನಿತಾಲಕ್ಷ್ಮೀ, ತಾ.ಪಂ.ಇಒ ರಾಜಣ್ಣ, ವಿವಿಧ ಸೆಕ್ಟರ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಲವು ಮತಗಟ್ಟೆಗಳಿಗೆ ತೆರಳಿ ಮತದಾನ ಪ್ರಕ್ರಿಯೆಗಳ ಉಸ್ತುವಾರಿ ಗಮನಿಸಿದರು. ಇಡೀ ದಿನ ಮತದಾನ ಶಾಂತಿಯುತವಾಗಿದ್ದು, ಪೊಲೀಸ್ ಇಲಾಖಾಧಿಕಾರಿಗಳು ಯಶಸ್ವಿಯಾಗಿ ಬಂದೋಬಸ್ತ್ ಮಾಡಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts