ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ ಚುನಾವಣೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಪ್ರಗತಿ ವಿವರಗಳನ್ನು ದಾಖಲಿಸಿಕೊಳ್ಳಲು ಮತ್ತು ಪ್ರತಿ ಎರಡು ಗಂಟೆಗೊಮ್ಮೆ ಮತದಾನದ ಪ್ರಗತಿಯ ವಿವರಗಳನ್ನು ಪಡೆಯಲು ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಇಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಸಿಬ್ಬಂದಿ ಗಣಕಯಂತ್ರಗಳ ಮೂಲಕ ದಾಖಲೀಕರಣವನ್ನು ನಡೆಸುತ್ತಿದ್ದು, ಬೆಳಗ್ಗೆ ಚುನಾವಣಾ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಸಿಬ್ಬಂದಿ ಕೇಂದ್ರಕ್ಕೆ ಹಾಜರಾಗಿ ಕರ್ತವ್ಯ ನಿರತರಾಗಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗ್ರಾಪಂ ಚುನಾವಣೆ: ಮೊಡಂಕಾಪಿನಲ್ಲಿ ಕಂಟ್ರೋಲ್ ರೂಮ್"