ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ ಚುನಾವಣೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಪ್ರಗತಿ ವಿವರಗಳನ್ನು ದಾಖಲಿಸಿಕೊಳ್ಳಲು ಮತ್ತು ಪ್ರತಿ ಎರಡು ಗಂಟೆಗೊಮ್ಮೆ ಮತದಾನದ ಪ್ರಗತಿಯ ವಿವರಗಳನ್ನು ಪಡೆಯಲು ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಇಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಸಿಬ್ಬಂದಿ ಗಣಕಯಂತ್ರಗಳ ಮೂಲಕ ದಾಖಲೀಕರಣವನ್ನು ನಡೆಸುತ್ತಿದ್ದು, ಬೆಳಗ್ಗೆ ಚುನಾವಣಾ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಸಿಬ್ಬಂದಿ ಕೇಂದ್ರಕ್ಕೆ ಹಾಜರಾಗಿ ಕರ್ತವ್ಯ ನಿರತರಾಗಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…