ಒಡಿಯೂರು ಕ್ಷೇತ್ರದಲ್ಲಿ ಶ್ರೀ ದತ್ತಜಯಂತಿ ಮಹೋತ್ಸವಕ್ಕೆ ಚಾಲನೆ

ಬಂಟ್ವಾಳ: ಬುಧವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.23ರಿಂದ ಡಿ.29ರ ವರೆಗೆ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಶ್ರೀಗಳ ಷಷ್ಠ್ಯಬ್ದ ಸಂಭ್ರಮಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿದರು.

ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ  ಕೇಂದ್ರ ಸಮಿತಿ ಕಾರ್ಯಧ್ಯಕ್ಷ ಪದ್ಮನಾಭ ಕೊಟ್ಟಾರಿ ಮಾತನಾಡಿ ಒಡಿಯೂರು ಸಂಸ್ಥಾನದಿಂದ ಸಮಾಜದಲ್ಲಿರುವ ಕಟ್ಟಕಡೇಯ ವ್ಯಕ್ತಿಯನ್ನೂ ಮೇಲೆ ತರುವ ನಿಟ್ಟಿನಲ್ಲಿಯೂ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಹೇಳಿದರು. ಸಾಧ್ವೀ ಮಾತಾನಂದಮಯಿ ದಿವ್ಯ ಸಾನಿಧ್ಯ ವಹಿಸಿದ್ದರು.

ಷಷ್ಠ್ಯಬ್ದ ಕಾರ್ಯಕ್ರಮ ದ ಲಾಂಛನ, ಸಂಸ್ಥಾನದ ಮುಖವಾಣಿ ದತ್ತಪ್ರಕಾಶನ, ಸಂಸ್ಥಾನದ ಕ್ಯಾಲೆಂಡರ್, ಹಾಗೂ 2021ರ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಆರಂಭ ನಡೆಯಿತು. ದತ್ತಮಾಲಾಧಾರಣೆ ನಡೆಯಿತು. ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ವಾಮಯ್ಯ ಬಿ ಶೆಟ್ಟಿ ಚೆಂಬೂರು ಮುಂಬೈ, ರೇವತಿ ವಾಮಯ್ಯ ಶೆಟ್ಟಿ, ಕೃಷ್ಣ ಎಲ್ ಶೆಟ್ಟಿ ಮುಂಬೈ, ಅಶೋಕ್ ಕುಮಾರ್ ಬಿಜೈ, ಅಜಿತ್ ಕುಮಾರ್ ಪಂದಲಂ ತಿರುವನಂತಪುರ, ಮಂಗಳೂರು ವಲಯದ ಪ್ರಧಾನ ಕಾರ್ಯದರ್ಶಿ ತಾರಾನಾಥ ಶೆಟ್ಟಿ ಬೋಳಾರ್, ಖಜಾಂಜಿ  ಸುರೇಶ್ ರೈ, ಮಂಗಳೂರು ವಲಯ ಸಂಚಾಲಕ ನಾಗರಾಜ ಆಚಾರ್ಯ, ಪುತ್ತೂರು ವಲಯ ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ನಗ್ರಿಗುತ್ತು ರೋಹಿತ್ ಶೆಟ್ಟಿ, ಲಿಂಗಪ್ಪ ಗೌಡ, ಸರ್ವಾಣಿ ಪಿ ಶೆಟ್ಟಿ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ನವನೀತ ಶೆಟ್ಟಿ ಕದ್ರಿ, ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು. ಯಶವಂತ ವಿಟ್ಲ ನಿರೂಪಿಸಿದರು. ನವನೀತ ಶೆಟ್ಟಿ ಕದ್ರಿ ಸ್ವಾಗತಿಸಿದರು. ಜಯಪ್ರಕಾಶ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಡಿಯೂರು ಕ್ಷೇತ್ರದಲ್ಲಿ ಶ್ರೀ ದತ್ತಜಯಂತಿ ಮಹೋತ್ಸವಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*